ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
TSK
TSK · ಆದಿಕಾಂಡ 14:18
Treasury of Scripture Knowledge references in ಕನ್ನಡ IRV.
ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.
“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
ಆದರೂ ಪರಾತ್ಪರನಾದ ದೇವರು ಮನುಷ್ಯರ ಕೈಯಿಂದ ಕಟ್ಟಿದ ನಿವಾಸಗಳಲ್ಲಿ ವಾಸಮಾಡುವವನಲ್ಲ.
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.
ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು.