TSK

TSK · ಆದಿಕಾಂಡ 15:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,

¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.

¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

¶ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.

ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.

‹ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.›

¶ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.