TSK

TSK · ಆದಿಕಾಂಡ 15:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.

ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.

ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.

ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.

ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.

ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.

“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.