TSK

TSK · ಆದಿಕಾಂಡ 17:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.

ಆಗ ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು” ಎಂಬುದಾಗಿ ಆಜ್ಞಾಪಿಸಿದನು.

ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.