TSK

TSK · ಆದಿಕಾಂಡ 17:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.

ಆ ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟು ಇರಬಾರದು. ಹುಳಿ ಬೆರಸಿದ್ದನ್ನು ಯಾರು ತಿನ್ನುವರೋ ಅವನು ಪರದೇಶದವನಾಗಲಿ, ಸ್ವದೇಶದವನಾಗಲಿ ಇಸ್ರಾಯೇಲ ಸಮೂಹದೊಳಗಿಂದ ತೆಗೆದುಹಾಕಲ್ಪಡಬೇಕು.

ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”

ಮನುಷ್ಯರು ಯೆಹೋವನಿಗೆ ಹೋಮಮಾಡುವಂತಹ ಪಶು ಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು.

ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.

ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.

ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.