TSK

TSK · ಆದಿಕಾಂಡ 17:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

¶ ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲ್ಯರಿಗೆ ಸುನ್ನತಿ ಮಾಡು” ಎಂದು ಹೇಳಲು

ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.

ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.

ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.