ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
TSK
TSK · ಆದಿಕಾಂಡ 17:4
Treasury of Scripture Knowledge references in ಕನ್ನಡ IRV.
ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.
¶ ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
¶ ಆದರೆ ಅವನ ತಂದೆ ಒಪ್ಪದೆ, “ಮಗನೇ ನಾನು ಬಲ್ಲೆ. ನನಗೆ ಗೊತ್ತು. ಇವನಿಂದಲೂ ಜನಾಂಗವುಂಟಾಗುವುದು. ಇವನು ಬಲಿಷ್ಠನಾಗುವನು. ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು. ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು” ಎಂದು ಹೇಳಿದನು.
¶ ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.