¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
TSK
TSK · ಆದಿಕಾಂಡ 17:5
Treasury of Scripture Knowledge references in ಕನ್ನಡ IRV.
¶ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.
ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು.
ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.