TSK

TSK · ಆದಿಕಾಂಡ 18:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.

¶ ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,

ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ

ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನು ಹತ್ತಿರ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದವರೆಗೆ ತಲೆಬಾಗಿ ನಮಸ್ಕರಿಸಿದನು.

¶ ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.

¶ ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.

¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು

ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ದೂರದಲ್ಲಿ ನಿಂತಿದ್ದ ಯೆರಿಕೋವಿನ ಪ್ರವಾದಿ ಮಂಡಳಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮವು ಎಲೀಷನ ಮೇಲೆ ಬಂದಿದೆ” ಎಂದು ತಿಳಿದುಕೊಂಡು ಅವನನ್ನು ಎದುರುಗೊಂಡು, ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.

ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.