TSK

TSK · ಆದಿಕಾಂಡ 19:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.

“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.

ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು.

¶ ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.

‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›

“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.

ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.