TSK

TSK · ಆದಿಕಾಂಡ 19:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಈ ಐದು ಅರಸರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್, ತಗ್ಗಿನ ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದರು.

ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!

ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”