TSK

TSK · ಆದಿಕಾಂಡ 19:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.

ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.

¶ “ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.

ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.