¶ ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.
TSK
TSK · ಆದಿಕಾಂಡ 19:3
Treasury of Scripture Knowledge references in ಕನ್ನಡ IRV.
¶ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
¶ ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
‹ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.›
¶ ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಅವರನ್ನು ದಾಟಿ ಇನ್ನೂ ಮುಂದಕ್ಕೆ ಹೋಗುವವನಂತೆ ತೋರ್ಪಡಿಸಿಕೊಂಡನು.
ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.
ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.