TSK

TSK · ಆದಿಕಾಂಡ 2:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.

ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.