¶ ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
TSK
TSK · ಆದಿಕಾಂಡ 2:5
Treasury of Scripture Knowledge references in ಕನ್ನಡ IRV.
ಆದಿಕಾಂಡ 1:11
TSK
ಆದಿಕಾಂಡ 4:2
TSK
ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.
ಯೋಬನು 5:10
TSK
ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.
ಕೀರ್ತನೆಗಳು 65:9
TSK
ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
ಕೀರ್ತನೆಗಳು 135:7
TSK
ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.
ಮತ್ತಾಯನು 5:45
TSK
‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›