ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
TSK
TSK · ಆದಿಕಾಂಡ 20:6
Treasury of Scripture Knowledge references in ಕನ್ನಡ IRV.
¶ ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.
ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.
ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.
ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
¶ ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;
ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.