¶ ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”
TSK
TSK · ಆದಿಕಾಂಡ 20:9
Treasury of Scripture Knowledge references in ಕನ್ನಡ IRV.
¶ ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
¶ ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,
¶ “‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
ನನ್ನ ಸ್ವಾಮಿಯು ತನ್ನ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೇ? ನಾನೇನು ಮಾಡಿದೆನು?
ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.