TSK

TSK · ಆದಿಕಾಂಡ 21:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.

¶ ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.

ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.

ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.

¶ ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.

¶ ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.