TSK

TSK · ಆದಿಕಾಂಡ 21:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.

¶ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.

ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.

‹ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,›‹ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.›