¶ ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
TSK
TSK · ಆದಿಕಾಂಡ 22:12
Treasury of Scripture Knowledge references in ಕನ್ನಡ IRV.
ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.
ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.
ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.
ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.
ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
‹ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.›
‹ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.›
¶ ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
¶ ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.