TSK

TSK · ಆದಿಕಾಂಡ 22:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.

ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;

“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ

ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.

¶ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?

ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.