TSK

TSK · ಆದಿಕಾಂಡ 22:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.

ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.

ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.

ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.

ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.