TSK

TSK · ಆದಿಕಾಂಡ 23:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.

ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.

ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.

ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”

‹ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.›

¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.