TSK

TSK · ಆದಿಕಾಂಡ 23:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.

¶ ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.

ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.

ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.

ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.

¶ ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.

¶ ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.

ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.

ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.

ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.

ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.

ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.

¶ ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.