TSK

TSK · ಆದಿಕಾಂಡ 23:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.

ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.

¶ “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.

ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.

ಆತನು, “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವತ್ತಾಗಿರುವುದು” ಎಂದು ಹೇಳಿದನು.

¶ ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.

¶ ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.