TSK

TSK · ಆದಿಕಾಂಡ 24:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.

¶ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.

ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.

¶ ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.

¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.

ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.

¶ ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.