TSK

TSK · ಆದಿಕಾಂಡ 24:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ” ಎಂದು ಹೇಳಿದನು.

ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.

ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.

ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು ‹“ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,”› ಎಂದು ಕೇಳಿದನು.