TSK

TSK · ಆದಿಕಾಂಡ 24:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು.

¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.

¶ ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.

ಅವನು “ಈಕೆಯು ಮೋವಾಬ್ ಸೀಮೆಯಿಂದ ನವೊಮಿಯ ಸಂಗಡ ಬಂದ ಮೋವಾಬ್ ಸ್ತ್ರೀ.” ಎಂದನು.

¶ ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.