TSK

TSK · ಆದಿಕಾಂಡ 24:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.

ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.

¶ “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.

¶ ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ, “ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡುವುದಾದರೆ

ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

¶ ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.

ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.

ಆಗ ಹೆಂಗಸರು ನವೊಮಿಗೆ “ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.

ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.

¶ ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.

ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.

ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.

ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.