TSK

TSK · ಆದಿಕಾಂಡ 24:44

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.

ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.

ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.