ಕೀರ್ತನೆಗಳು 1:2
TSK
ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
TSK
Treasury of Scripture Knowledge references in ಕನ್ನಡ IRV.
ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.
ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು, ಆಗ ನಿನ್ನ ಬೋಧನೆಗಳನ್ನು ಧ್ಯಾನಿಸುವೆನು.
ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ, ಅವುಗಳು ಎಷ್ಟೋ ಅಸಂಖ್ಯವಾಗಿವೆ.
ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.