TSK

TSK · ಆದಿಕಾಂಡ 24:67

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,

¶ ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು.

ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಗಾಗಿ ಗೋಳಾಡಿ ಕಣ್ಣೀರು ಸುರಿಸಿದನು.

ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,

ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.

“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.

¶ ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, ಕರ್ತನು ಪುನರಾಗಮಿಸುವವರೆಗೆ ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.