TSK

TSK · ಆದಿಕಾಂಡ 25:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹುಷಾಮನು ಸತ್ತ ನಂತರ ಮೋವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.

¶ ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

¶ ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.

“ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.

ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.

ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.

¶ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.