TSK

TSK · ಆದಿಕಾಂಡ 27:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

¶ ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು,

ಆತನಲ್ಲಿ ಬಲವೂ, ಸಾಮರ್ಥ್ಯವೂ ಉಂಟು; ತಪ್ಪಿದವನೂ, ತಪ್ಪಿಸಿದವನೂ ಆತನಿಗೆ ಅಧೀನರಾಗಿರುವರು.

“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.