TSK

TSK · ಆದಿಕಾಂಡ 27:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ಆಕೆಯ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಾಡುತ್ತಿದ್ದಾಗ ಆಕೆಯು, “ಹೀಗಾದರೆ ನಾನು ಹೇಗೆ ಬದುಕಬೇಕು” ಎಂದು ಹೇಳಿ ಇದರ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ಹೋದಳು.

¶ ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?

¶ ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.

ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.

ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

¶ ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›