ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.
TSK
TSK · ಆದಿಕಾಂಡ 27:40
Treasury of Scripture Knowledge references in ಕನ್ನಡ IRV.
ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
¶ ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.
ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.
¶ ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.
ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.
ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
¶ ‹“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.›