TSK

TSK · ಆದಿಕಾಂಡ 28:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.

ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ

ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

¶ ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.

ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.

ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.

¶ ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,

ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ

¶ ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?