TSK

TSK · ಆದಿಕಾಂಡ 28:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?

ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.

ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ.

ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.