ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೂ ಬಂಧುಗಳ ಬಳಿಗೂ ಹಿಂತಿರುಗಿ ಹೋಗು’” ಎಂದು ಹೇಳಿದನು.
TSK
TSK · ಆದಿಕಾಂಡ 28:20
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಇದಲ್ಲದೆ ಅವನು ಯೆಹೋವನಿಗೆ, “ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.
ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.
¶ ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.
ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.
ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.
ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.
ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
¶ ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.
¶ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.