¶ ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.
TSK
TSK · ಆದಿಕಾಂಡ 29:1
Treasury of Scripture Knowledge references in ಕನ್ನಡ IRV.
ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.
¶ ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
¶ ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
¶ ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
¶ ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.
¶ ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.