ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.
TSK
TSK · ಆದಿಕಾಂಡ 29:32
Treasury of Scripture Knowledge references in ಕನ್ನಡ IRV.
¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
¶ ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.
¶ ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
¶ ಐಗುಪ್ತ ದೇಶಕ್ಕೆ ಬಂದು ಸೇರಿದ ಇಸ್ರಾಯೇಲನ ಮಕ್ಕಳ ಹೆಸರುಗಳು: ಯಾಕೋಬನು ಮತ್ತು ಅವನ ಚೊಚ್ಚಲ ಮಗನಾದ ರೂಬೇನನು.
¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.
“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.
ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
¶ ಎಫ್ರಾಯೀಮಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.