ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
TSK
TSK · ಆದಿಕಾಂಡ 3:16
Treasury of Scripture Knowledge references in ಕನ್ನಡ IRV.
ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
¶ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.
ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.
ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.
ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.
¶ ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
‹ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.›
ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
¶ ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆಯಲ್ಲಿಯೂ, ಪ್ರೀತಿಯಲ್ಲಿಯೂ, ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಮಕ್ಕಳನ್ನು ಹೆರುವುದರಲ್ಲಿ ರಕ್ಷಣೆಹೊಂದುವರು.
¶ ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.