ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
TSK
TSK · ಆದಿಕಾಂಡ 3:20
Treasury of Scripture Knowledge references in ಕನ್ನಡ IRV.
ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”
ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,