TSK

TSK · ಆದಿಕಾಂಡ 3:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರ ಕೊಟ್ಟನು.

“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.

ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರವು ಸಿಕ್ಕಿಕೊಂಡಿತು. ಅ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬವು ಹಿಡಿಯಲ್ಪಟ್ಟಿತು.

ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.