TSK

TSK · ಆದಿಕಾಂಡ 31:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.

¶ ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,

¶ ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,

ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.