ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
TSK
TSK · ಆದಿಕಾಂಡ 31:36
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.
ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ” ಎಂದು ಹೇಳಿದನು.
ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, ‹“ನಿನ್ನ ಕೈ ಚಾಚು”› ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.