ಯೆಹೋಶುವ 7:23
TSK
ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
TSK
Treasury of Scripture Knowledge references in ಕನ್ನಡ IRV.
ಆಳುಗಳು ಅವುಗಳನ್ನು ಗುಡಾರದೊಳಗಿನಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಾಯೇಲ್ಯರೂ ಇದ್ದಲ್ಲಿಗೆ ಬಂದು ಯೆಹೋವನ ಮುಂದಿಟ್ಟರು.
‹ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ›‹ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.›
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.