TSK

TSK · ಆದಿಕಾಂಡ 31:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.

¶ ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ, “ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವುದಕ್ಕಿಂತ ಮೊದಲೇ ಅವನು ತಂದಿದ್ದರಲ್ಲಿ ನಾನು ಊಟಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು” ಎಂದನು.

ಅವರಿಗೆ ಹೇಳಿದ್ದೇನಂದರೆ, “ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಿಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.

ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.

ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.

ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

“ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ.

ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.