TSK

TSK · ಆದಿಕಾಂಡ 31:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.

ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.

ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.

ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.