ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.
TSK
TSK · ಆದಿಕಾಂಡ 31:48
Treasury of Scripture Knowledge references in ಕನ್ನಡ IRV.
ಆದಿಕಾಂಡ 31:23
TSK
(ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.
ಯೆಹೋಶುವ 22:27
TSK
ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
ಯೆಹೋಶುವ 22:34
TSK
ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
¶ ತೋಲನ ಮರಣದ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.